ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ: ಎತ್ತಿನಗಾಡಿಗೆ ಡಿಕ್ಕಿ ಹೊಡೆದ ಓಮ್ನಿ: ಇಬ್ಬರಿಗೆ ಗಂಭೀರ ಗಾಯ, ಎತ್ತು ಸಾವು...!

ದಾವಣಗೆರೆ: ಎತ್ತಿನಗಾಡಿಗೆ ಓಮ್ನಿ ಡಿಕ್ಕಿ ಹೊಡೆದ ಪರಿಣಾಮ ಸುಮಾರು ಎಂಟು ಮಂದಿ ಗಾಯಗೊಂಡ ಘಟನೆ ನಡೆದಿದೆ. ಒಂದು ಎತ್ತು ಸಾವನ್ನಪ್ಪಿದ್ದು, ಮತ್ತೊಂದು ಎತ್ತಿಗೆ ಹೊಡೆತ ಬಿದ್ದ ಘಟನೆ ಹೊನ್ನಾಳಿ ತಾಲೂಕಿನ ಸೊರಟೂರು ಗ್ರಾಮದಲ್ಲಿ ನಡೆದಿದೆ.

ಹಳ್ಳೂರು ಗ್ರಾಮದ ಮಹಿಳೆಯರನ್ನು ಶಿಕಾರಿಪುರದ ಗಾರ್ಮೆಂಟ್ಸ್ ಗೆ ಕೆಲಸಕ್ಕೆ ಹೋಗುತ್ತಿದ್ದರು. ಓಮ್ನಿಯಲ್ಲಿ ಚಾಲಕನು ಪ್ರತಿನಿತ್ಯವೂ ಮಹಿಳೆಯರನ್ನು ಕರೆದುಕೊಂಡು ಹೋಗಿ ಬರುತ್ತಿದ್ದ. ಶಿಕಾರಿಪುರದಿಂದ ಹೊನ್ನಾಳಿ ಮಾರ್ಗದ ಕಡೆ ಹೋಗುತ್ತಿದ್ದ ಓಮ್ನಿಯು ಸೊರಟೂರು ತಿರುವಿನ ಬಳಿ ಜಮೀನಿಗೆ ಹೋಗಿ ಕೆಲಸ ಮುಗಿಸಿ ಎತ್ತಿನಗಾಡಿಯಲ್ಲಿ ರೈತ ಬರುವಾಗ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಗಾಯಗೊಂಡವರನ್ನು ಹೊನ್ನಾಳಿ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ಎರಡು ಆ್ಯಂಬುಲೆನ್ಸ್ ಗಳ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಕೂಡಲೇ‌ ಕರೆದೊಯ್ಯಲಾಯಿತು. ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಇನ್ನು ಚಾಲಕ ಪರಾರಿಯಾಗಿದ್ದಾನೆ. ಮತ್ತೊಂದು ಎತ್ತು ಗಂಭೀರವಾಗಿ ಗಾಯಗೊಂಡಿದೆ.

ಇನ್ನು ಈ ವೇಳೆ‌ ಮಾರ್ಗಮಧ್ಯೆ ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ್ ಅವರು ತೆರಳುತ್ತಿದ್ದರು. ಅಪಘಾತ ನಡೆದ ಸ್ಥಳದಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು. ಮಾತ್ರವಲ್ಲ, ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ಕೊಡಿಸಿದರು.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಹೊನ್ನಾಳಿ ಸರ್ಕಲ್ ಇನ್ ಸ್ಪೆಕ್ಟರ್ ದೇವರಾಜ್ ಅವರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಸಹಕರಿಸಿದರು. ಮಾತ್ರವಲ್ಲ, ಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಆಸ್ಪತ್ರೆಗೆ ಗಾಯಾಳುಗಳನ್ನ ಸೇರಿಸಲು ನೆರವಾದರು.

Edited By : Shivu K
PublicNext

PublicNext

09/09/2021 09:39 pm

Cinque Terre

111.35 K

Cinque Terre

2

ಸಂಬಂಧಿತ ಸುದ್ದಿ