ಬೆಂಗಳೂರು: ಬೊಲೆರೊ ವಾಹನದ ಇಂಜಿನ್‌ನಲ್ಲಿ ಕಾಣಿಸಿಕೊಂಡ ಸಣ್ಣ ಕಿಡಿ ನಂತರ ಇಡೀ ಹೋಟೆಲ್ ಕಟ್ಟಡವನ್ನೇ ಆವರಿಸಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಎಂ.ಜಿ ರಸ್ತೆಯ ಅಜಂತಾ ಟ್ರಿನಿಟಿ ಹೋಟೆಲ್‌ನಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಆಗಿಲ್ಲ. ಈ ವೇಳೆ ಕಟ್ಟಡದಲ್ಲಿದ್ದ 7 ಜನ ಪಾರಾಗಿದ್ದಾರೆ.
ಸೋಮವಾರ ರಾತ್ರಿ 10.30ರ ಸುಮಾರಿಗೆ ಘಟನೆ ನಡೆದಿದ್ದು, ಕೂದಲೆಳೆಯ ಅಂತರದಲ್ಲಿ ಭಾರೀ ಅಗ್ನಿ ಅವಘಡ ತಪ್ಪಿದಂತಾಗಿದೆ. ಘಟನೆ ವೇಳೆ 7 ಜನ ಜಸ್ಟ್ ಸೇಫ್ ಆಗಿದ್ದಾರೆ. ದಟ್ಟ ಹೊಗೆ ಆವರಿಸಿದ್ದನ್ನು ಗಮನಿಸಿದ ವ್ಯಕ್ತಿ ಕೂಡಲೇ ಎರಡನೇ ಮಹಡಿಯಿಂದ ಕಿಟಕಿ ಮೂಲಕ ಜಿಗಿದಿದ್ದಾರೆ. ಘಟನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಪೀಠೋಪಕರಣ ಭಸ್ಮವಾಗಿದ್ದು, ಹೋಟೆಲ್ ನ ರಿಸಪ್ಷನ್ ಜಾಗ ಸಂಪೂರ್ಣ ಸುಟ್ಟು ಕರಕಲಾಗಿದೆ.
ನಾಗೇಶ್, ಮಹೇಂದ್ರ, ಸತ್ಯಪ್ರಕಾಶ್, ದಿನೇಶ್, ಅಭಿಷೇಕ್, ರಾಚಪ್ಪಜಿ ಮತ್ತು ಶೇಖರ್ ಅವರನ್ನು ರಕ್ಷಣೆ ಮಾಡಲಾಗಿದೆ. 7 ಜನರಲ್ಲಿ ಇಬ್ಬರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೆ ಪಾರ್ಕಿಂಗ್ ಲಾಟ್ ನಲ್ಲಿದ್ದ ಒಂದು ಆಟೋ, ಒಂದು ಜೀಪ್ ಸುಟ್ಟು ಕರಕಲಾಗಿದೆ. ಘಟನೆ ಸಂಬಂಧ ಹಲಸೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
14/09/2021 08:22 am