ವರದಿ: ಮೌನೇಶ ಬಿ. ಮಂಗಿಹಾಳ, ಪಬ್ಲಿಕ್ ನೆಕ್ಸ್ಟ್ ಯಾದಗಿರಿ
ಯಾದಗಿರಿ: ಚಾಲಕ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ರಸ್ತೆ ಪಕ್ಕದ ಜಮೀನಿನಲ್ಲಿ ಪಲ್ಟಿಯಾಗಿ, 21 ಜನರಿಗೆ ಗಂಭೀರವಾಗಿ ಗಾಯಗೊಂಡಿರೋ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಅನವಾರ ಕ್ರಾಸ್ ಬಳಿ ಇಂದು ನಡೆದಿದೆ.
ಈ ಕೆಎ 34 ಎಫ್ 1160 ಸರ್ಕಾರಿ ಬಸ್ 51 ಜನ ಪ್ರಯಾಣಿಕರನ್ನು ಹತ್ತಿಸಿಕೊಂಡು ಸುರಪುರದಿಂದ ಹತ್ತಿಗೂಡುರ ಮಾರ್ಗವಾಗಿ ಯಾದಗಿರಿಗೆ ತೆರಳಿತ್ತು.
ಬಸ್ ಚಲಾಯಿಸುತ್ತಿದ್ದ ಡ್ರೈವರ್ ನಿಯಂತ್ರಣ ತಪ್ಪಿ ಅನವಾರ ಬಳಿ ಈ ದುರ್ಘಟನೆ ಸಂಭವಿಸಿದ್ದು, ಕೆಲವರಿಗೆ ಸಣ್ಣ-ಪುಟ್ಟ ಗಾಯವಾಗಿದ್ದರೆ. ಇನ್ನು ಕೆಲವರಿಗೆ ಕೈ ಕಾಲು ಮುರಿದಿವೆ ಎನ್ನಲಾಗ್ತಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಎಲ್ಲಾ ಗಾಯಳುಗಳನ್ನ ಆಂಬುಲೆನ್ಸ್ ಮೂಲಕ ಶಹಾಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗ್ತಿದೆ.
ಇನ್ನು ಈ ಬಗ್ಗೆ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
14/09/2021 01:34 pm