ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿ ಎಲಿವೇಟೆಡ್ ಫ್ಲೈಓವರ್ ಮೇಲೆ ಬೈಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೇಲ್ಸೇತುವೆ ಮೇಲಿಂದ ಕೆಳಗೆ ಬಿದ್ದು ಯುವಕ ಮತ್ತು ಯುವತಿ ಸಾವನ್ನಪ್ಪಿದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ತಮಿಳುನಾಡಿನ ಚೆನ್ನೈ ಮೂಲದ ಪ್ರೀತಮ್ (30) ಹಾಗೂ ಕೃತಿಕಾ (28) ಮೃತ ದುರ್ದೈವಿಗಳು. ಮಂಗಳವಾರ ರಾತ್ರಿ 9:20ರ ಸಮಯದಲ್ಲಿ ಸಿಲ್ಕ್ ಬೋರ್ಡ್ ಕಡೆಯಿಂದ ಎಲೆಕ್ಟ್ರಾನಿಕ್ ಸಿಟಿ ಮಾರ್ಗವಾಗಿ ಬರುತ್ತಿದ್ದ ಕಾರು ಅತಿ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಪರಿಣಾಮ ಈ ಇಬ್ಬರೂ ಟೆಕ್ಕಿಗಳು ಸಾವನ್ನಪ್ಪಿದ್ದಾರೆ. ಈ ಭಯಾನಕ ಘಟನೆಯ ದೃಶ್ಯವು ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
PublicNext
15/09/2021 04:31 pm