ಬೆಂಗಳೂರು: ರಾಜಧಾನಿಯಲ್ಲಿ ಸರಣಿ ಅಪಘಾತಗಳು ನಡೆಯುತ್ತಿವೆ. ಅತ್ತಿಬೆಲೆಯ ನೆರಳೂರು ಬಳಿ ಅಪಘಾತ ಸಂಭವಿಸಿದೆ.
ಮುಂಬದಿಯಲ್ಲಿ ನಿಧಾನವಾಗಿ ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಆಂಬುಲೆನ್ಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಆಂಬುಲೆನ್ಸ್ ನಲ್ಲಿ ಇದ್ದ ಐವರಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ತೀವ್ರವಾಗಿ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಿನ ಜಾವ 5 ಗಂಟೆಗೆ ಈ ಘಟನೆ ನಡೆದಿದ್ದು ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.
PublicNext
16/09/2021 08:12 am