ತೀರ್ಥಹಳ್ಳಿ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಆಗುಂಬೆ ಘಾಟಿ ಯಲ್ಲಿ ಇವತ್ತು ಕಾರೊಂದು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ.ಘಾಟಿಯ ಎರಡನೆಯ ತಿರುವಿನಲ್ಲಿ ಈ ದುರ್ಘಟನೆ ಸಂಭವಿಸಿತು.ಘಾಟಿ ರಸ್ರೆಯಲ್ಲಿ ಚಲಿಸುತ್ತಿದ್ದ ನಿಸ್ಸಾನ್ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ಭಸ್ಮಗೊಂಡಿದೆ.ಬಳಿಕ ಅಗ್ನಿಶಾಮಕದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
PublicNext
19/09/2021 08:11 pm