ಚಿತ್ರದುರ್ಗ: ನಿಂತಿದ್ದ ಲಾರಿಗೆ ಹಿಂಬದಿಯಿಂದ ಪ್ಯಾಷನ್ ಪ್ರೋ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಇರುವ ಕ್ಯಾದಿಗೆರೆ ಬಳಿ ನಡೆದಿದೆ. ಮೃತರನ್ನು ಚಿತ್ರದುರ್ಗ ನಗರದ ಕಾಮನಬಾವಿ ಬಡಾವಣೆಯ ಗಣೇಶ(22) ಮತ್ತು ಶಿವು(20) ಚೋಳ ಗುಡ್ಡದ ನಿವಾಸಿಗಳು ಎಂದು ಗುರುತಿಸಲಾಗಿದೆ.
ಇಬ್ಬರು ಯುವಕರು ಚಿತ್ರದುರ್ಗದಿಂದ ಐಮಂಗಲದಲ್ಲಿ ಮನೆಯ ಎಲೆಕ್ಟ್ರಿಕಲ್ ಕೆಲಸಕ್ಕೆ ತೆರಳಿದ್ದು, ವಾಪಾಸ್ಸು ಬರುವಾಗ ಕ್ಯಾದಿಗೆರೆ ಬಳಿ ಈ ಘಟನೆ ನಡೆದಿದೆ ಎಂದು ಪೋಲಿಸರು ತಿಳಿಸಿದ್ದಾರೆ.
ಸ್ಥಳಕ್ಕೆ ಎಸ್ಪಿ ಜಿ. ರಾಧಿಕಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
28/09/2021 10:51 am