ಕಲಬುರಗಿ : ಕೆಲವೊಂದು ಸಂದರ್ಭಗಳಲ್ಲಿ ಸಾವು ಹೇಗೆ ಬರುತ್ತದೆ ಎನ್ನುವುದು ಯಾರಿಗೂ ಊಹಿಸಲು ಸಾಧ್ಯವಿಲ್ಲ.ಸದ್ಯ ಪಾರ್ಕಿನಲ್ಲಿ ಆಟ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಸಾವಿಗೀಡಾಗಿರುವ ಘಟನೆ ಕಲಬುರಗಿಯ ಎನ್ ಜಿಓ ಕಾಲೋನಿಯ ಹನುಮಾನ್ ಮಂದಿರ ಗಾರ್ಡನ್ ನಲ್ಲಿ ನಡೆದಿದೆ.
ಸಿದ್ದು (6) ವಿದ್ಯುತ್ ತಂತಿ ತಗುಲಿ ಮೃತಪಟ್ಟ ಬಾಲಕ. ಪಾರ್ಕ್ ನಲ್ಲಿ ಹೈಮಾಸ್ಕ್ ದೀಪದ ವಿದ್ಯುತ್ ವೈರ್ ತುಂಡಾಗಿ ಬಿದ್ದಿತ್ತು. ಆಟವಾಡುತ್ತಾ ಹೋಗಿ ವಿದ್ಯುತ್ ವೈರ್ ತುಳಿದ ಬಾಲಕ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಮಗನನ್ನು ಕಳೆದುಕೊಂಡ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ಸಂಬಂಧ ಸ್ಥಳೀಯ ಠಾಣೆಯಲ್ಲಿ ದೂರು ದಾಖಲಾಗಿದೆ.
PublicNext
30/09/2021 07:47 am