ವಿಜಯಪುರ: ಸಾರಿಗೆ ಬಸ್ ಒಂದು ಟ್ರಾಕ್ಟರ್ ಗೆ ಸೈಡ್ ನೀಡಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದಲ್ಲಿ ನಡೆದಿದೆ.
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಆ ವೇಳೆಯಲ್ಲಿ ವಿದ್ಯುತ್ ಆಫ್ ಆಗಿರುವ ಕಾರಣ, ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 30 ಕ್ಕೂ ಹೆಚ್ಚು ಮಂದಿ ಸ್ವಲ್ಪದರಲ್ಲೇ ಈ ಅವಘಡದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
PublicNext
01/10/2021 11:07 am