ಬೆಂಗಳೂರು : ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ದೇವನಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಮಗು ಸೇರಿ ಮೂವರಿಗೆ ಗಾಯವಾಗಿದೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಇನ್ನು ಸ್ಪೋಟದ ತೀವ್ರತೆಗೆ ಮನೆಯ ಛಾವಣಿ ಹಾಳಾಗಿದ್ದು ಮನೆಯ ಮೂವರಿಗೆ ಸುಟ್ಟಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ.
ಸದ್ಯ ಗಾಯಾಳುಗಳನ್ನು ದೊಡ್ಡಬಳ್ಳಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
PublicNext
02/10/2021 09:49 am