ಬಾರಾಬಂಕಿ: ಉತ್ತರಪ್ರದೇಶದ ಬಾರಾಬಂಕಿಯಲ್ಲಿ ಇಂದು ಬೆಳಗ್ಗೆ ಬಸ್-ಟ್ರಕ್ ನಡುವೆ ಭೀಕರ ಅಪಘಾತದಲ್ಲಿ 9 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಯೋಧ್ಯೆಯ ಕಡೆ ಬರುತ್ತಿದ್ದ ಬಸ್ ಮುಂಬದಿಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.
ಘಟನೆಯಲ್ಲಿ ಕೆಲವರು ಗಂಭೀರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಬಾರಾಬಂಕಿ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
PublicNext
07/10/2021 10:34 am