ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆಯುಧ ಪೂಜೆ ದಿನವೇ ಅನಾಹುತ : ಕಾರು ಡಿಕ್ಕಿ ಇಬ್ಬರು ಸಾವು

ರಾಮನಗರ: ಇಂದು ಆಯುಧ ಪೂಜೆ ಸಂಭ್ರಮ ಎಲ್ಲೆಡೆ ಹಬ್ಬಕ್ಕೆ ಬೇಕಾದ ವಸ್ತುಗಳ ಮಾರಾಟ ತುಸು ಜೋರಾಗಿಯೇ ಇತ್ತು. ಆದರೆ ಕಾರೊಂದು ರಸ್ತೆ ಪಕ್ಕದಲ್ಲಿ ನಿಂತಿದ್ದ ಹೂ ಮಾರುವ ವ್ಯಕ್ತಿ ಮತ್ತು ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ರಾಮನಗರದ ಎಪಿಎಂಸಿ ಮಾರುಕಟ್ಟೆ ಬಳಿ ನಡೆದಿದೆ.

ಬೆಂಗಳೂರಿನಿಂದ ಮೈಸೂರಿಗೆ ಹೋಗುತ್ತಿದ್ದ ರಿಡ್ಜ್ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದಲ್ಲಿ ಹೂ ಮಾರುತ್ತಾ ನಿಂತ್ತಿದ್ದ ವ್ಯಕ್ತಿಗೆ ಗುದ್ದಿದೆ. ಅಲ್ಲದೆ, ಅಲ್ಲಿಯೇ ಇದ್ದ ಬೈಕ್ ಸವಾರನಿಗೂ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಕಾರು ಚಾಲಕನಿಗೂ ಗಾಯವಾಗಿದೆ. ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Edited By : Nirmala Aralikatti
PublicNext

PublicNext

14/10/2021 11:00 pm

Cinque Terre

44.88 K

Cinque Terre

0

ಸಂಬಂಧಿತ ಸುದ್ದಿ