ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು : ಎಸ್.ಆರ್.ಎಸ್ ಹಾಗೂ ಮ್ಯಾಕ್ಸಿ ಕ್ಯಾಬ್ ನಡುವೆ ಭೀಕರ ಅಪಘಾತ; ನಾಲ್ವರ ಸಾವು.

ತುಮಕೂರು : ತಾಲೂಕಿನ ಹೆಗ್ಗೆರೆ ಸಮೀಪದ ಗೊಲ್ಲಹಳ್ಳಿ ಬಳಿ ಬೆಳಗಿನ ಜಾವ 5.30ರ ಸಮಯದಲ್ಲಿ ತುಮಕೂರು - ಶಿವಮೊಗ್ಗ ಹೆದ್ದಾರಿಯಲ್ಲಿ ಎಸ್.ಆರ್.ಎಸ್ ಬಸ್ ಹಾಗೂ ಮ್ಯಾಕ್ಸಿ ಕ್ಯಾಬ್ ನಡುವೆ ಭೀಕರ ಅಪಘಾತ ನಡೆದಿದ್ದು ಸ್ಥಳದಲ್ಲೇ ನಾಲ್ವರು ಸಾವನಪ್ಪಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ.

ತುಮಕೂರಿನ ಮಾರುಕಟ್ಟೆಗೆ ಹೂ ತರುತ್ತಿದ್ದ ರೈತರು ಈ ಅಪಘಾತಕ್ಕೀಡಾಗಿದ್ದಾರೆ. ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸರು ದೌಡಾಯಿಸಿ ತನಿಖೆ ಕೈಗೊಳ್ಳುತ್ತಿದ್ದಾರೆ.

Edited By : Nirmala Aralikatti
PublicNext

PublicNext

17/10/2021 07:51 am

Cinque Terre

49.18 K

Cinque Terre

0