ಮುಂಬೈ: ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ ಕೆಳಗೆ ಬಿದ್ದ ಗರ್ಭಿಣಿಯನ್ನು ರೈಲ್ವೇ ಭದ್ರತಾ ಪಡೆಯ ಸಿಬ್ಬಂದಿಯೊಬ್ಬರು ರಕ್ಷಿಸಿದ ಘಟನೆ ಮುಂಬೈನ ಕಲ್ಯಾಣ್ ರೈಲು ನಿಲ್ದಾಣದಲ್ಲಿ ನಡೆದಿದೆ.
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸುತ್ತಿದ್ದ ವೇಳೆ ಗರ್ಭಿಣಿಯೊಬ್ಬರು ಆಯತಪ್ಪಿ ಬಿದ್ದಿದ್ದಾರೆ. ಈ ವೇಳೆ ಅರೆಕ್ಷಣವೂ ವ್ಯರ್ಥ ಮಾಡದೆ ಕಾನ್ಸ್‌ಸ್ಟೇಬಲ್ ಈಕೆಯ ರಕ್ಷಣೆಗೆ ಧಾವಿಸಿದ್ದಾರೆ. ಈ ದೃಶ್ಯವು ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ರೈಲ್ವೇ ಪೊಲೀಸ್ ಸಮಯಪ್ರಜ್ಞೆಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ
PublicNext
19/10/2021 03:28 pm