ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಾಲಾ ವಾಹನ ಪಲ್ಟಿ : ಚಾಲಕ ಎಸ್ಕೇಪ್

ತುಮಕೂರು: ಕೊರೊನಾ ನಂತರ ಈಗಷ್ಟೇ ಶಾಲೆಗಳು ಪುನಾರಂಭಗೊಂಡಿವೆ. ಈ ಸಂದರ್ಭದಲ್ಲಿ ಶಾಲಾ ವಾಹನ ಪಲ್ಟಿಯಾಗಿ ಹತ್ತು ಮಕ್ಕಳು ಗಾಯಗೊಂಡಿರುವ ಘಟನೆ ಕೊರಟಗೆರೆ ತಾಲೂಕಿನ ಕಾಶಾಪುರ ಬಳಿ ನಡೆದಿದೆ. ಬೈಚಾಪುರ ಸಮೀಪದ ಖಾಸಗಿ ಶಾಲೆಯ ವಾಹನ ಚಾಲಕನ ನಿರ್ಲಕ್ಷ್ಯದಿಂದ ಪಲ್ಟಿ ಸಂಭವಿಸಿದೆ. ಘಟನೆಯಲ್ಲಿ ಸುಮಾರು ಹತ್ತು ಮಕ್ಕಳು ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಕೊರಟಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಇನ್ನು ಅಪಘಾತವಾಗುತ್ತಿದ್ದಂತೆಯೇ ಶಾಲೆಯ ವಾಹನ ಚಾಲಕ ಪರಾರಿಯಾಗಿದ್ದಾನೆ. ಚಾಲಕ ಪಾನಮತ್ತನಾಗಿ ವಾಹನ ಚಾಲನೆ ಮಾಡಿದ್ದಲ್ಲದೇ ಅತಿವೇಗ ಮತ್ತು ಅವೈಜ್ಞಾನಿಕ ಚಾಲನೆ ಮಾಡಿರುವುದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಕೊರಟಗೆರೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

Edited By : Nirmala Aralikatti
PublicNext

PublicNext

21/10/2021 03:55 pm

Cinque Terre

32.42 K

Cinque Terre

2

ಸಂಬಂಧಿತ ಸುದ್ದಿ