ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಾಗಲಕೋಟೆ: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿ: ಸೈಕಲ್ ಸವಾರ ಸಾವು

ಬಾಗಲಕೋಟೆ: ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಗೋಠೆ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ವಿಠ್ಠಲ ರಾಮಪ್ಪ ಮಾಳಿ (೫೦) ಎಂಬುವವರೇ ಮೃತಪಟ್ಟ ದುರ್ದೈವಿ.

ಗೋಠೆ ಗ್ರಾಮದಿಂದ ಗದ್ಯಾಳ ಗ್ರಾಮದ ಕಡೆಗೆ ಕಬ್ಬು ಹೇರಿದ್ದ ಟ್ರ್ಯಾಕ್ಟರ್ ಬರುತ್ತಿತ್ತು. ಇದೇ ವೇಳೆ ಚಾಲಕನ ನಿರ್ಲಕ್ಷ್ಯದಿಂದ ಟ್ರ್ಯಾಕ್ಟರ್ ಪಲ್ಟಿಯಾಗಿದೆ ಎನ್ನಲಾಗಿದೆ. ಪಕ್ಕದಲ್ಲೇ ಸೈಕಲ್ ಮೇಲೆ ಹೊರಟಿದ್ದ ಸವಾರ ವಿಠ್ಠಲ ರಾಮಪ್ಪ ಮಾಳಿ ಅವರ ಮೈ ಮೇಲೆ ಕಬ್ಬಿನ ರಾಶಿ ಬಿದ್ದಿದೆ. ಪರಿಣಾಮ ವಿಠ್ಠಲ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಬಗ್ಗೆ ಸಾವಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nagesh Gaonkar
PublicNext

PublicNext

25/10/2021 05:32 pm

Cinque Terre

48.71 K

Cinque Terre

0

ಸಂಬಂಧಿತ ಸುದ್ದಿ