ವಿಜಯಪುರ: ಕ್ಯಾಂಟರ್ ವಾಹನ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ತಂದೆ-ಮಗ ಸ್ಥಳದಲ್ಲೇ ಮೃತಪಟ್ಟ ಹೃದಯವಿದ್ರಾವಕ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಜೋಡಗುಡಿ ಹತ್ತಿರ ನಡೆದಿದೆ.
ಬಪ್ಪು ರಾಠೋಡ ಹಾಗೂ ಯೋಗಿ ರಾಠೋಡ ಎಂಬುವವರೇ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಕ್ಯಾಂಟರ್ ವಾಹನ ಚಾಲಕನ ಅತೀವೇಗ ಹಾಗೂ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಬಂದು ತಂದೆ-ಮಗನ ಶವ ಕಂಡ ಕುಟಂಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಹೊರ್ತಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
PublicNext
26/10/2021 10:23 pm