ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ಬಸ್‌ ಟೈರ್ ಸ್ಫೋಟ: ಚಾಲಕನ ಸಮಯ ಪ್ರಜ್ಞೆಯಿಂತ ತಪ್ಪಿತು ಅನಾಹುತ

ಗದಗ: ಟೈರ್ ಸ್ಫೋಟಗೊಂಡ ಪರಿಣಾಮ ವಾಯವ್ಯ ಸಾರಿಗೆ ಸಂಸ್ಥೆಯ ಬಸ್ ರಸ್ತೆಯ ಬದಿಗೆ ವಾಲಿದ್ದು, ಓರ್ವ ವಿದ್ಯಾರ್ಥಿನಿ ಸೇರಿ ಹಲವರಿಗೆ ಗಾಯಗಳಾಗಿರುವ ಘಟನೆ ತಾಲೂಕಿನ ಹಿರೇಕೊಪ್ಪ ಗ್ರಾಮದ ಬಳಿ ನಡೆದಿದೆ.

ಗದಗದಿಂದ ಅರಹುಣಸಿ ಗ್ರಾಮಕ್ಕೆ ತೆರಳುತ್ತಿದ್ದ ಬಸ್ ಹಿರೇಕೊಪ್ಪ ಗ್ರಾಮದ ಬಳಿ ಹೋಗುತ್ತಿದ್ದಂತೆ ದಿಢೀರನೇ ಟೈರ್ ಸ್ಫೋಟಗೊಂಡಿದೆ. ಇದರಿಂದ ಬಸ್ ನಿಯಂತ್ರಣ ತಪ್ಪಿದರೂ ಚಾಲಕನ ಸಮಯಪ್ರಜ್ಞೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಚಾಲಕ ಬಸ್ ನಿಲುಗಡೆ ಮಾಡಲು ರಭಸವಾಗಿ ಹಾಕಿದ ಬ್ರೇಕ್‌ನಿಂದ ಬಸ್‌ನಲ್ಲಿದ್ದ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳೀಯರು ಆಂಬ್ಯುಲೆನ್ಸ್ ಮೂಲಕ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಗದಗದ ಜಿಮ್ಸ್ ಆಸ್ಪತ್ರೆಗೆ ಕಳುಹಿಸಿ ಕೊಟ್ಟಿದ್ದಾರೆ. ಸುದ್ದಿ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Edited By : Nagaraj Tulugeri
PublicNext

PublicNext

03/11/2021 12:45 pm

Cinque Terre

21.47 K

Cinque Terre

1

ಸಂಬಂಧಿತ ಸುದ್ದಿ