ಮೈಸೂರು: ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವತಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ. ಮೈಸೂರು ಜಿಲ್ಲೆ ಟಿ. ನರಸೀಪುರ ತಾಲ್ಲೂಕಿನ ಹೆಮ್ಮಿಗೆ ಸೇತುವೆ ಬಳಿ ಈ ಘಟನೆ ನಡೆದಿದ್ದು ಇದರ ವಿಡಿಯೋ ಈಗ ವೈರಲ್ ಆಗುತ್ತಿದೆ.
ಸೇತುವೆಯಿಂದ ನದಿಗೆ ಹಾರಿದ್ದನ್ನು ಗಮಿನಿಸಿದ ಸ್ಥಳೀಯ ದೋಣಿ ಸವಾರರು ಕೂಡಲೇ ಧಾವಿಸಿ ಯುವತಿಯನ್ನು ರಕ್ಷಿಸಿದ್ದಾರೆ. ಅದೃಷ್ಟವಶಾತ್, ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಯುವತಿಯನ್ನ ತೆಪ್ಪದಲ್ಲಿ ಹಾಕಿಕೊಂಡು ದಡ ಸೇರಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹಾಗೂ ಯುವತಿಯನ್ನು ರಕ್ಷಿಸಿದ ದೋಣಿ ಸವಾರರ ಸಮಯಪ್ರಜ್ಞೆಗೂ ಸಹ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
PublicNext
07/11/2021 11:17 am