ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗೂಳಿಯಂತೆ ನುಗ್ಗಿದ ಕಾರು: ಹಾರಿ ಬಿದ್ದ ಬೈಕ್‌ಗಳು- ಬಾಲಕ ಬಲಿ, 8 ಜನರಿಗೆ ಗಾಯ

ಜೈಪುರ್: ಐಷಾರಾಮಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮುಂದೆ ಬರುತ್ತಿದ್ದ ಹಾಗೂ ನಿಂತಿದ್ದ ಬೈಕ್‌ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, 8 ಜನರಿಗೆ ಗಾಯಗೊಂಡಿದ್ದಾರೆ.

ಈ ದುರಂತವು ರಾಜಸ್ಥಾನದ ಜೋಧ್‌ಪುರದಲ್ಲಿ ಇಂದು ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೋಡುಗರ ಮೈ ಜುಮ್ ಎನ್ನುವಂತಿದೆ.

ಚಾಲಕನ ನಿಯಂತ್ರಣ ತಪ್ಪಿದ ಕಾರು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ. ಪೊಲೀಸರು ಕಾರು ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಇತ್ತ ಗಾಯಾಳುಗಳನ್ನು ಜೋಧಪುರದ ಮಥುರಾದಾಸ್ ಮಾಥುರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Edited By : Nagesh Gaonkar
PublicNext

PublicNext

09/11/2021 09:45 pm

Cinque Terre

106.72 K

Cinque Terre

4

ಸಂಬಂಧಿತ ಸುದ್ದಿ