ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕಿನ ತೋಪುರಮಾಳಿಗೆ ಗೇಟ್ ಬಳಿ ನಡೆದ ಲಾರಿ ಬೈಕ್ ಮಧ್ಯೆದ ಭೀಕರ ಅಪಘಾತದಲ್ಲಿ ಬೈಕ್ ಸವಾರರ ಕಾಲುಗಳು ತುಂಡಾಗಿ ಹೋಗಿವೆ. ಚಿತ್ರದುರ್ಗದಿಂದ ಚಳ್ಳಕೆರೆ ಮಾರ್ಗವಾಗಿ ತೆರಳುತ್ತಿದ್ದ ಲಾರಿ ಮತ್ತು ಬೈಕ್ ಮಧ್ಯೆ ಡಿಕ್ಕಿಯಾಗಿ ಲಾರಿ ಹೊತ್ತಿ ಉರಿದಿದೆ. ಇನ್ನು ಅಪಘಾತವಾಗುತ್ತಿದ್ದಂತೆ ಲಾರಿ ಚಾಲಕ ಸ್ಥಳದಲ್ಲೇ ಲಾರಿ ಬಿಟ್ಟು ಪರಾರಿಯಾಗಿದ್ದಾನೆ.
ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
PublicNext
11/11/2021 09:21 pm