ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿಯಲ್ಲಿ ರಸ್ತೆ ದಾಟುವ ವೇಳೆ ಅವಘಡ : ವ್ಯಕ್ತಿ ಮೇಲೆ ಹರಿದ ಲಾರಿ

ಹುಬ್ಬಳ್ಳಿ: ರಸ್ತೆ ದಾಟುತ್ತಿದ್ದ ವ್ಯಕ್ತಿಯ ಮೇಲೆ ಮರಳು ಸಾಗಾಟ ಮಾಡುತ್ತಿದ್ದ ಲಾರಿಯೊಂದು ಹರಿದ ಪರಿಣಾಮ ವ್ಯಕ್ತಿಯೋರ್ವನು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಹುಬ್ಬಳ್ಳಿಯ ಗಾಳಿ ದುರ್ಗಮ್ಮ ದೇವಸ್ಥಾನದ ಬಳಿಯಲ್ಲಿ ನಡೆದಿದೆ.

ರಸ್ತೆ ದಾಟುತ್ತಿದ್ದಾಗ ಲಾರಿ ಪಾದಚಾರಿ ಮೇಲೆ ಹರಿದು ಈ ಘಟನೆ ನಡೆದಿದೆ. ಇನ್ನೂ ಮೃತಪಟ್ಟ ವ್ಯಕ್ತಿ ಯಾರು ಎಂಬ ಮಾಹಿತಿ ಲಭ್ಯವಾಗಿಲ್ಲ.‌ ಸ್ಥಳಕ್ಕೆ ಉತ್ತರ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಹುಬ್ಬಳ್ಳಿಯ ಕೀಮ್ಸ್ ಶವಾಗರಕ್ಕೆ ರವಾನೆ ಮಾಡಲಾಗಿದೆ.

ಈ ಸಂಬಂಧ ಹುಬ್ಬಳ್ಳಿಯ ಉತ್ತರ ಸಂಚಾರಿ ಪೊಲೀಸರು ಅಪಘಾತ ಪಡಿಸಿದ ಲಾರಿಯನ್ನು ವಶಕ್ಕೆ ಪಡೆದಿದ್ದು, ಪ್ರಕರಣವನ್ನು ದಾಖಲು ಮಾಡಿದ್ದಾರೆ.

Edited By : Nirmala Aralikatti
PublicNext

PublicNext

12/11/2021 05:40 pm

Cinque Terre

85.15 K

Cinque Terre

8

ಸಂಬಂಧಿತ ಸುದ್ದಿ