ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವು ಇದ್ದ ಉಪಹಾರ ಸೇವಿಸಿ 52 ವಿದ್ಯಾರ್ಥಿಗಳು ಅಸ್ವಸ್ಥ : ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ

ಯಾದಗಿರಿ : ಉಪಹಾರದಲ್ಲಿ ಹಾವು ಪತ್ತೆಯಾಗಿದ್ದು ಇದೇ ಉಪಹಾರ ಸೇವಿಸಿ 52 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಜಿಲ್ಲಾಸ್ಪತ್ರೆ ಸೇರಿರುವ ಘಟನೆ ಯಾದಗಿರಿ ತಾಲೂಕಿನ ಅಬ್ಬೆತುಮಕೂರನ ವಿಶ್ವರಾಧ್ಯ ವಿದ್ಯಾವರ್ಧಕ ವಸತಿ ಶಾಲೆಯಲ್ಲಿ ನಡೆದಿದೆ.

ಇಂದು ಬೆಳಿಗ್ಗೆ ಉಪಹಾರವಾಗಿ ವಿದ್ಯಾರ್ಥಿಗಳು ಉಪ್ಪಿಟ್ಟು ಸೇವಿಸಿ ಅಸ್ವಸ್ಥಗೊಂಡಿದ್ದಾರೆ. ಇನ್ನು ಉಪಹಾರದಲ್ಲಿ ಸತ್ತ ಹಾವಿನ ಮರಿ ಪತ್ತೆಯಾಗಿದೆ. ಇತ್ತ ಹಾವಿನ ಮರಿ ಪತ್ತೆಯಾದ ನಂತರ ವಿದ್ಯಾರ್ಥಿಗಳು ಇನ್ನು ಹೆಚ್ಚು ಆತಂಕಗೊಂಡಿದ್ದಾರೆ.

ಸದ್ಯ ಅಸ್ವಸ್ಥಗೊಂಡ 52 ವಿದ್ಯಾರ್ಥಿಗಳಿಗೆ ಮುದ್ನಾಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಹೆಚ್ಚಿನ ಚಿಕಿತ್ಸೆ ಪಡೆಯಲು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಆಸ್ಪತ್ರೆಗೆ ಟಿಹೆಚ್ಓ ಹಣಮಂತರೆಡ್ಡಿ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿ ವಿದ್ಯಾರ್ಥಿಗಳಿಗೆ ಸದ್ಯಕ್ಕೆ ಯಾವುದೇ ತೊಂದರೆ ಇಲ್ಲ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹಣಮಂತರೆಡ್ಡಿ ಮಾಹಿತಿ ನೀಡಿದ್ದಾರೆ.

Edited By : Nirmala Aralikatti
PublicNext

PublicNext

18/11/2021 01:27 pm

Cinque Terre

54.72 K

Cinque Terre

5

ಸಂಬಂಧಿತ ಸುದ್ದಿ