ಬೆಂಗಳೂರು: ನೋಡ ನೋಡುತ್ತಲೆ ಹೋಟೆಲ್ ನಿಂದ ಮುಗಿಲೆತ್ತರಕ್ಕೆ ಆವರಿಸಿದ ಬೆಂಕಿಯ ಕೆನ್ನಾಲಿಗೆ ದೇವನಹಳ್ಳಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ 7 ರ ಹೋಟೆಲ್ ಹೊತ್ತಿ ಉರಿದಿದೆ.
ಬೆಂಕಿಯ ಕೆನ್ನಾಲಿಗೆಗೆ ಹೋಟೆಲ್ ಒಳಗಿದ್ದ ಪೀಠೋಪಕರಣ, ಸುಟ್ಟು ಭಸ್ಮವಾಗಿವೆ. ಇನ್ನು ಬೆಂಕಿಯ ರುದ್ರನರ್ತನಕ್ಕೆ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದ್ದು, ಅಗ್ನಿ ಶಾಮಕ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಅದೃಷ್ಟವಶಾತ್ ಹೋಟೆಲ್ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನೆಮ್ಮದಿಯ ಸಂಗತಿ ಎಂದರೆ ಗ್ರಾಹಕರಿಲ್ಲದ ಕಾರಣ ಭಾರಿ ಅನಾಹುತ ತಪ್ಪಿದ್ದು,ದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
PublicNext
18/11/2021 04:18 pm