ಗದಗ : ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಮೇವುಂಡಿ- ಡಂಬಳದ ಬಳಿ ಕಾರು – ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದೆ.
ಅಪಘಾತದಲ್ಲಿ 6 ವರ್ಷದ ಮಗು, 45 ವರ್ಷದ ವ್ಯಕ್ತಿ ಹಾಗೂ 70 ವರ್ಷದ ವೃದ್ದೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು ಮತ್ತೋರ್ವ ಮಹಿಳೆ ಸ್ಥಿತಿ ಗಂಭೀರವಾಗಿದೆ. ಮೃತರು ಹುಬ್ಬಳ್ಳಿ ನವನಗರ, ನಿವಾಸಿಗಳಾಗಿದ್ದು ಹೆಸರು ತಿಳಿದು ಬಂದಿಲ್ಲ.
ಇನ್ನು ಡಿಕ್ಕಿ ರಭಸಕ್ಕೆ ಕಾರ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಮುಂಡರಗಿಯಿಂದ ಹುಬ್ಬಳ್ಳಿ ಗೆ ಹೊರಟ್ಟಿದ್ದ ಕಾರ್ ಇದಾಗಿತ್ತು. ಸ್ಥಳಕ್ಕೆ ಮುಂಡರಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಗದಗ ಜಿಲ್ಲೆಯ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
21/11/2021 09:03 pm