ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೊಸಳೆ ದಾಳಿಗೆ ಕೊಂಕಲ್ ಗ್ರಾಮದ ವ್ಯಕ್ತಿ ಬಲಿ

ಯಾದಗಿರಿ: ಜಿಲ್ಲೆಯ ವಡಗೇರಾ ತಾಲ್ಲೂಕಿನ ಕೊಂಕಲ್‌ ಗ್ರಾಮದ ಕೃಷ್ಣಾ ನದಿಯ ದಡದಲ್ಲಿ ಬುಧವಾರ ಸೌದೆ ತರಲು ಹೋಗಿದ್ದ ವ್ಯಕ್ತಿ ಮೇಲೆ ಮೊಸಳೆ ದಾಳಿ ಮಾಡಿದ್ದು, ಇಂದು ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾನೆ. ರಾತ್ರಿವೇಳೆಯಲ್ಲಿ ಮೀನುಗಾರರು ಶೋಧ ಕಾರ್ಯ ನಡೆಸಿದ್ದು, ರಾತ್ರಿ ಸಮಯದಲ್ಲಿ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗೆ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿ ಶವವನ್ನು ಪತ್ತೆ ಹಚ್ಚಿದ್ದಾರೆ.

ಇನ್ನು ಘಟನಾ ಸ್ಥಳಕ್ಕೆ ತಹಶೀಲ್ದಾರ್ ಸುರೇಶ ಅಂಕಲಗಿ ಹಾಗೂ ಕಂದಾಯ ನಿರೀಕ್ಷಕ ಸಂಜುಕುಮಾರ ಕವಲಿ, ಅಗ್ನಿ ಶಾಮಕದಳದ ಅಧಿಕಾರಿಗಳು, ಅರಣ್ಯ ಇಲಾಖೆ ಅಧಿಕಾರಿಗಳು ಆಗಮಿಸಿ ಘಟನೆಯ ಮಾಹಿತಿ ಪಡೆದಿದ್ದಾರೆ. ಈ ಘಟನೆ ವಡಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Edited By : Nirmala Aralikatti
PublicNext

PublicNext

25/11/2021 02:40 pm

Cinque Terre

27.58 K

Cinque Terre

0