ಕೊಪ್ಪಳ : ಬಸ್ ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮರಳಿ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಅಪಘಾತದಲ್ಲಿ ಕುಷ್ಟಗಿ ಮೂಲದ ಪ್ರವೀಣ್ (28) ಮೃತಪಟ್ಟ ಯುವಕ ಶ್ರೀರಾಮನಗರದ ಖಾಸಗಿ ವಿದ್ಯಾಸಂಸ್ಥೆಯಲ್ಲಿ ವಾರ್ಡನ್ ಆಗಿ ಕೆಲಸ ಮಾಡುತ್ತಿದ್ದ ಈತ ಇಂದು ಮರಳಿ ಗ್ರಾಮಕ್ಕೆ ಬರುವ ವೇಳೆ ಆಂದ್ರಪ್ರದೇಶದ ವಿಜಯವಾಡಕ್ಕೆ ತೆರಳುತಿದ್ದ ಬಸ್ ನಡುವೆ ಅಪಘಾತ ಸಂಭವಿಸಿ ಮೃತಪಟ್ಟಿದ್ದಾನೆ.
ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
PublicNext
26/11/2021 05:07 pm