ಬೆಂಗಳೂರು: ಕೆಎಸ್ಆರ್‌ಟಿಸಿ ಬಸ್ ಹರಿದು ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿರುವ ಘಟನೆ ನಗರದ ಕೊಡಿಗೆಹಳ್ಳಿ ಸರ್ಕಲ್ ಬಳಿ ನಡೆದಿದೆ.
ಕಾವೇರಿ ಭವನದಿಂದ ದೊಡ್ಡಬಳ್ಳಾಪುರಕ್ಕೆ ಹೋಗ್ತಿದ್ದ ಕೆ ಎ -40 - ಎಫ್ - 0994 ನಂಬರಿನ ಬಸ್, ದ್ವಿಚಕ್ರ ವಾಹನ ಸವಾರನ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಸವಾರ ಸಾವನ್ನಪ್ಪಿದ್ದಾನೆ. ಆಕ್ಸಿಡೆಂಟ್ ಆಗ್ತಿದ್ದಂತೆ ಕೆಎಸ್ಆರ್‌ಟಿಸಿ ಡ್ರೈವರ್ ಮತ್ತು ಕಂಡಕ್ಟರ್ ಪರಾರಿಯಾಗಿದ್ದಾರೆ. ಸದ್ಯ ಮೃತ ಸವಾರನ ಚಹರೆ ಪತ್ತೆಯಾಗಿಲ್ಲ. ಹೆಬ್ಬಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
28/11/2021 03:39 pm