ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ಈರುಳ್ಳಿ ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿ- ಇಬ್ಬರು ಸಾವು, ನಾಲ್ವರಿಗೆ ಗಾಯ

ಗದಗ: ಈರುಳ್ಳಿ ತುಂಬಿದ್ದ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ ಹಾಗೂ ನಾಲ್ವರು ಗಾಯಗೊಂಡ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ರಡ್ಡೆರ ನಾಗನೂರು ಗ್ರಾಮದಲ್ಲಿ ನಡೆದಿದೆ.

ರಡ್ಡೆರ ನಾಗನೂರು ಗ್ರಾಮದ ಲಕ್ಷ್ಮವ್ವ (45) ಹಾಗೂ ಯಮನಮ್ಮ (60) ಮೃತ ದುರ್ದೈವಿಗಳು. ಗಾಯಗೊಂಡ ನಾಲ್ವರನ್ನು ನರಗುಂದ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇವರೆಲ್ಲರೂ ತಮ್ಮದೇ ಗ್ರಾಮದ ಮುದ್ದಿಗೌಡ ಗದ್ದಿಗೌಡ್ರ ಎಂಬ ರೈತರ ಜಮೀನಿನಲ್ಲಿ ಕೆಲಸಕ್ಕೆ ಹೋಗಿದ್ದರು. ಈರುಳ್ಳಿ ಹೇರಿಕೊಂಡು ಹೊರಟಿದ್ದ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದು ಪಲ್ಟಿ ಹೊಡೆದಿದೆ. ನರಗುಂದ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Edited By : Shivu K
PublicNext

PublicNext

01/12/2021 07:37 pm

Cinque Terre

102.56 K

Cinque Terre

2