ಚಿತ್ರದುರ್ಗ: ಈರುಳ್ಳಿ ಸಾಗಿಸುತ್ತಿದ್ದ ಲಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ಚಿತ್ರದುರ್ಗ ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗದಗ ಜಿಲ್ಲೆ ರೋಣದಿಂದ ಬೆಂಗಳೂರಿಗೆ ಈರುಳ್ಳಿ ಸಾಗಣೆ ವೇಳೆ ರಾಷ್ಟ್ರೀಯ ಹೆದ್ದಾರಿ 40 ರಲ್ಲಿ ನಡೆದ ಈರುಳ್ಳಿ ಲಾರಿ ಪಂಕ್ಚರ್ ಆಗಿದೆ. ಈ ವೇಳೆ ಪಂಕ್ಚರ್ ಹಾಕುತ್ತಿದ್ದ ವೇಳೆ ಟ್ಯಾಂಕರ್ ಬಂದು ಗುದ್ದಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ರಾಯಚೂರು ಮೂಲದ ಹುಲುಗಪ್ಪ, ಕುಷ್ಟಗಿ ಮೂಲದ ಮಂಜುನಾಥ, ವಿಜಯಪುರ ಮೂಲದ ಕ್ಲೀನರ್ ಸಂಜಯ್, ರೋಣ ಮೂಲದ ಚಾಲಕ ಶರಣಪ್ಪ ಎಂದು ಗುರುತಿಸಲಾಗಿದೆ.
ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
PublicNext
04/12/2021 07:39 am