ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ : ಅಗ್ನಿ ಅವಘಡ ಸುಟ್ಟು ಕರಕಲಾದ ಕುರುಕಲು ತಿಂಡಿ

ಗದಗ: ಆಕಸ್ಮಿಕ ಬೆಂಕಿಗೆ ಲಕ್ಷಾಂತರ ರೂಪಾಯಿ ಮೌಲ್ಯದ ಕುರುಕಲು ತಿಂಡಿಗಳು ಸುಟ್ಟು ಭಸ್ಮವಾಗಿರುವ ಘಟನೆ ನಗರದ ಗ್ರೇನ್ ಮಾರುಕಟ್ಟೆಯಲ್ಲಿ ನಡೆದಿದೆ.

ಎಂ.ಎಂ.ನರೇಗಲ್ ಎಂಬುವವರಿಗೆ ಸೇರಿದ ಕಿರಾಣಿ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕುರುಕಲು ತಿಂಡಿಗಳು,ಪಾನ್ ಮಸಾಲಾ ಪಾಕೆಟ್, ಪಾನ್ ಸುಪಾರಿಗಳು ಸೇರಿದಂತೆ ಅಪಾರ ಪ್ರಮಾಣದ ಸಾಮಗ್ರಿಗಳು ಬೆಂಕಿಗಾಹುತಿಯಾಗಿದೆ.

ನಿನ್ನೆ ತಡರಾತ್ರಿ ನಡೆದ ಅಗ್ನಿ ಅವಘಡ ಇದಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗದಗ ಶಹರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Edited By : Shivu K
PublicNext

PublicNext

05/12/2021 03:32 pm

Cinque Terre

84.01 K

Cinque Terre

1

ಸಂಬಂಧಿತ ಸುದ್ದಿ