ಬೆಂಗಳೂರು: ಉತ್ತರಪ್ರದೇಶ ಮೂಲದ ವೀರೇಂದ್ರಕುಮಾರ್ ಹಾಗೂ ಸುಮನ್ ದಂಪತಿಯ 13 ವರ್ಷದ ಪುತ್ರಿ ವೈಷ್ಣವಿ ಅಪಾರ್ಟ್ ಮೆಂಟ್ ನ 12ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಕಳೆದ 20 ವರ್ಷದಿಂದ ಬೆಂಗಳೂರಿನ ವೇಣುಗೋಪಾಲ ನಗರದ ನಿತೀಶ್ ಪಾರ್ಕ್ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದರು. ಇನ್ನು ಬಾಲ್ಕನಿಯಲ್ಲಿ ಆಟವಾಡುತ್ತಿದ್ದ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವೈಷ್ಣವಿ ಮೃತಪಟ್ಟಿದ್ದಾಳೆ.
ಘಟನೆ ಕುರಿತು ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
06/12/2021 01:13 pm