ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ದೇವರಹಳ್ಳಿ ಗೇಟ್ ಬಳಿ ಬೊಲೆರೋ ಪಿಕಪ್ ಹಾಗೂ ಬೈಕ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಓರ್ವನ ಸ್ಥಿತಿ ಚಿಂತಾಜನಕವಾಗಿದೆ.
ಮೃತರು ಹಾಸನ ಜಿಲ್ಲೆಯ ಅರಸೀಕೆರೆ ಮೂಲದವರು ಎಂದು ತಿಳಿದು ಬಂದಿದೆ. ಚಿಕ್ಕಮಗಳೂರಿನಿಂದ ಕೆಲಸ ಮುಗಿಸಿಕೊಂಡು ಹೋಗುತ್ತಿದ್ದ ವೇಳೆ ಬೊಲೆರೋ ವಾಹನ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.
ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
PublicNext
08/12/2021 07:16 pm