ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೊತ್ತಿ ಉರಿದ ಕೋಟ್ಯಾಂತರ ರೂ. ಮೌಲ್ಯದ 40ಕ್ಕೂ ಹೆಚ್ಚು BMW ಕಾರುಗಳು

ಮುಂಬೈ: ಶೋರೂಮ್ ಕಮ್ ಗೋಡೌನ್‌ನಲ್ಲಿ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ 40ಕ್ಕೂ ಹೆಚ್ಚು ಬಿಎಂಡಬ್ಲ್ಯು ಕಾರುಗಳು ಸುಟ್ಟು ಭಸ್ಮವಾದ ಘಟನೆ ನವಿ ಮುಂಬೈನ ಟುರ್ಬೆ ಎಂಐಡಿಸಿ ಪ್ರದೇಶದಲ್ಲಿ ಇಂದು ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ.

ಇಂದು ಬೆಳಗ್ಗೆ 5.30ರ ಸುಮಾರಿಗೆ ಶೋರೂಮ್‌ಗೆ ಬೆಂಕಿ ಬಿದ್ದಿದೆ ಎಂದು ಎಂಐಡಿಸಿ ಅಗ್ನಿಶಾಮಕ ದಳದ ಮುಖ್ಯ ಅಧಿಕಾರಿ ಆರ್.ಬಿ.ಪಾಟೀಲ್ ತಿಳಿಸಿದ್ದಾರೆ. ಬೆಂಕಿಯ ತೀವ್ರತೆ ಅತಿಹೆಚ್ಚಾಗಿ ಇದ್ದುದರಿಂದ ಕೇವಲ ಎಂಐಡಿಸಿ ಪ್ರದೇಶದ ಅಗ್ನಿಶಾಮಕ ದಳದ ಸಿಬ್ಬಂದಿ, ವಾಹನ ಸಾಕಾಗಲಿಲ್ಲ. ಒಟ್ಟು 10 ಫೈರ್ ಫೈಟ್ ಟ್ರಕ್‍ಗಳನ್ನು ತರಲಾಗಿತ್ತು. ಎಲ್ಲ ಸೇರಿ ಹೋರಾಟ ಮಾಡಿದರೂ ಬೆಂಕಿ ನಂದಿಸಲು 6ಗಂಟೆಗಳ ಕಾಲ ಬೇಕಾಯಿತು ಎಂದು ವರದಿಯಾಗಿದೆ.

ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎನ್ನುವುದು ಇನ್ನೂ ತಿಳಿದುಬಂದಿಲ್ಲ. ಬೆಂಕಿಯ ತೀವ್ರತೆಗೆ 40ಕ್ಕೂ ಹೆಚ್ಚು ಬಿಎಂಡಬ್ಲ್ಯು ಕಾರುಗಳು, ಶೋರೂಂನಲ್ಲಿದ್ದ ಎಲ್ಲ ದಾಖಲೆಗಳು ಮತ್ತು ಪೀಠೋಪಕರಣಗಳು ಸುಟ್ಟು ಭಸ್ಮವಾಗಿವೆ. ಟುರ್ಬೆ ಪೊಲೀಸ್ ಠಾಣೆಯ ಅಧಿಕಾರಿಗಳು ಈ ನಿಟ್ಟಿನಲ್ಲಿ ತನಿಖೆ ನಡೆಸುತ್ತಿದ್ದಾರೆ.

Edited By : Nagesh Gaonkar
PublicNext

PublicNext

08/12/2021 08:16 pm

Cinque Terre

60.37 K

Cinque Terre

1

ಸಂಬಂಧಿತ ಸುದ್ದಿ