ಚೆನ್ನೈ: ಹೆಲಿಕಾಪ್ಟರ್ ಅಪಘಾತದಲ್ಲಿ ಮಡಿದ ಸಿಡಿಎಸ್ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಇತರ ಸಿಬ್ಬಂದಿಯ ಪಾರ್ಥಿವ ಶರೀರವನ್ನು ಆಂಬ್ಯುಲೆನ್ಸ್‌ನಲ್ಲಿ ಸುಲೂರ್ ಏರ್ ಬೇಸ್‌ಗೆ ಕೊಂಡೊಯ್ಯಲಾಯಿತು. ಈ ವೇಳೆ ರಸ್ತೆಯ ಎರಡೂ ಬದಿಗೆ ನಿಂತಿದ್ದ ನೂರಾರು ಜನರು ಪುಷ್ಪನಮನ ಸಲ್ಲಿಸಿ 'ಭಾರತ್ ಮಾತಾ ಕಿ ಜೈ' ಎಂದು ಘೋಷಣೆ ಕೂಗಿದರು. ಮೃತ ಯೋಧರಿಗೆ ವಿಶೇಷ ನಮನ ಸಲ್ಲಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
PublicNext
09/12/2021 04:23 pm