ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಣಿವೆ ರಾಜ್ಯದಲ್ಲಿ ಉಗ್ರರ ದಾಳಿ: ಇಬ್ಬರು ಪೊಲೀಸರು ಹುತಾತ್ಮ

ಶ್ರೀನಗರ: ಕಣಿವೆ ರಾಜ್ಯ ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುಲ್ಶಾನ್ ಚೌಕದ ಬಳಿ ಅಪರಿಚಿತ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆ.

ಹುತಾತ್ಮರಾದ ಪೊಲೀಸರನ್ನು ಮೊಹಮ್ಮದ್ ಸುಲ್ತಾನ್ ಹಾಗೂ ಫಯಾಜ್ ಅಹಮ್ಮದ್ ಎಂದು ಗುರುತಿಸಲಾಗಿದೆ.'ಗುಲ್ಶಾನ್ ಚೌಕದ ಬಳಿ ಇರುವ ಪೊಲೀಸ್ ಚೌಕಿ ಮೇಲೆ ಏಕಾಏಕಿ ಉಗ್ರರು ಗುಂಡಿನ ದಾಳಿ ನಡೆಸಿದರು. ಈ ವೇಳೆ ತೀವ್ರವಾಗಿ ಗಾಯಗೊಂಡ ಇಬ್ಬರು ಪೊಲೀಸರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟ ಬಗ್ಗೆ ಪೊಲೀಸರು ತಿಳಿಸಿದರು.

ಸದ್ಯ ದಾಳಿ ಶೋಧ ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Edited By : Nirmala Aralikatti
PublicNext

PublicNext

10/12/2021 06:58 pm

Cinque Terre

34.09 K

Cinque Terre

1