ಹೈದರಾಬಾದ್: ವೇಗವಾಗಿ ಬಂದ ಲಾರಿಯೊಂದು ಸ್ಕೂಟಿಗೆ ಡಿಕ್ಕಿ ಹೊಡೆದು ಓರ್ವ ಇಂಜಿನಿಯರಿಂದ ವಿದ್ಯಾರ್ಥಿನಿಯನ್ನು ಬಲಿ ಪಡೆದ ಭಯಾನಕ ಘಟನೆ ಹೈದರಾಬಾದ್‌ನ ಹೊರವಲಯದಲ್ಲಿ ನಡೆದಿದೆ.
ಮೇಘನಾ (20) ಮೃತ ಇಂಜಿನಿಯರಿಂಗ್ ವಿದ್ಯಾರ್ಥಿನಿ. ಮೂರನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಘನಾ ತನ್ನ ಕಾಲೇಜಿನ ನಾಲ್ಕನೇ ವರ್ಷದ ವಿದ್ಯಾರ್ಥಿನಿ ಸುಮಾ ಜೊತೆಗೆ ಡಿಸೆಂಬರ್ 9ರಂದು ಸ್ಕೂಟಿಯಲ್ಲಿ ತೆರಳುತ್ತಿದ್ದರು. ದುಂಡಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ಗಂಡಿಮೈಸಮ್ಮ ಚೌರಸ್ತಾದಲ್ಲಿ ವೇಗವಾಗಿ ಬಂದ ಲಾರಿ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ನಿಯಂತ್ರಣ ತಪ್ಪಿದ ಸ್ಕೂಟಿ ಓಡಿಸುತ್ತಿದ್ದ ಮೇಘನಾ ಲಾರಿ ಚಕ್ರದ ಅಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಸ್ಕೂಟಿ ಹಿಂದಿಯಲ್ಲಿ ಕುಳಿತಿದ್ದ ಸುಮಾ ಪ್ರಾಣಪಾಯದಿಂದ ಪಾರಾಗಿದ್ದಾರೆ.
ಸುಮಾ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಲಾರಿ ಚಾಲಕನನ್ನು ಬಂಧಿಸಿರುವ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
PublicNext
11/12/2021 04:32 pm