ಕಾರವಾರ: ಮುಂಬೈನಿಂದ ಮಂಗಳೂರು ನಗರಕ್ಕೆ ಹೊರಟಿದ್ದ ಖಾಸಗಿ ಬಸ್‌ಗೆ ಬೆಂಕಿ ತಗುಲಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಬಸ್‌ನಲ್ಲಿದ್ದ 22 ಮಂದಿ ಪ್ರಯಾಣಿಕರ ಜೀವ ಉಳಿದಿದೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದ ಜೋಡಕೆರೆ ಬಳಿಯ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಇಂದು (ಗುರುವಾರ) ಬೆಳಗಿನ ಜಾವ ಈ ಘಟನೆ ನಡೆದಿದೆ. ಬೆಂಕಿಯ ತೀವ್ರತೆಗೆ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ.
ತಾಂತ್ರಿಕ ದೋಷದಿಂದ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿದ್ದು ಲಕ್ಷಾಂತರ ರೂ ಹಾನಿಯಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.
PublicNext
16/12/2021 10:50 am