ವರದಿ: ಮೌನೇಶ ಬಿ. ಮಂಗಿಹಾಳ, ಪಬ್ಲಿಕ್ ನೆಕ್ಸ್ಟ್ ಯಾದಗಿರಿ
ಯಾದಗಿರಿ: ಕೂಲಿ ಕಾರ್ಮಿಕರನ್ನು ಕೆಲಸಕ್ಕೆ ಕರೆದುಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಕಾರ್ಮಿಕರಿಬ್ಬರು ಮೃತಪಟ್ಟಿರೋ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ನಾಯ್ಕಲ್ ಬಳಿ ನಡೆದಿದೆ.
ಪರವಿನ್ ಬೇಗಂ, ಮಾನಮ್ಮ ಸ್ಥಳದಲ್ಲೆ ಮೃತಪಟ್ಟಿದ್ದು, 10 ಜನ ಕಾರ್ಮಿಕರಿಗೆ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳು ಯಾದಗಿರಿ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟ್ರ್ಯಾಕ್ಟರ್ ಚಾಲಕ ಟ್ರ್ಯಾಕ್ಟರನ್ನು ಅತಿವೇಗವಾಗಿ ಚಲಾಯಿಸುವಾಗ ಇಂಜಿನ್ ಮತ್ತು ಟ್ರ್ಯಾಯಲಿ ಮಧ್ಯೆ ಇರುವ ಕೊಂಡಿ ಮುರಿದು ಟ್ರ್ಯಾಕ್ಟರ ಪಲ್ಟಿಯಾಗಿದ್ದರಿಂದ ಈ ದುರ್ಘಟನೆ ಸಂಭವಿಸಿದ್ದು, ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿ ಡಾ.ರಾಗಾಪ್ರಿಯಾ ಆರ್. ಅವರು ಭೇಟಿ ನೀಡಿ ಗಾಯಾಳುಗಳ ಅರೋಗ್ಯ ವಿಚಾರಿಸಿದ್ದಾರೆ.
ಅಲ್ಲದೇ ಯಾದಗಿರಿ ಎಸ್ಪಿ ಡಾ. ಸಿ.ಬಿ ವೇದಮೂರ್ತಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅತಿವೇಗವಾಗಿ ಮತ್ತು ಅಪಾಯಕಾರಿಯಾಗಿ ಟ್ರ್ಯಾಕ್ಟರ್ ಚಾಲನೆ ಮಾಡುತ್ತಿದ್ದ ಚಾಲಕನ ಮತ್ತು ಟ್ರ್ಯಾಕ್ಟರ್ ಮಾಲೀಕನ ವಿರುದ್ದ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಇನ್ನು ಕೂಲಿ ಕಾರ್ಮಿಕರನ್ನು ಮತ್ತು ವಿದ್ಯಾರ್ಥಿಗಳನ್ನು ವಾಹನಗಳ ಟಾಪ್ ಮೇಲೆ ಮತ್ತು ಅಪಾಯಕಾರಿಯಾಗಿ ಕೂಡಿಸಿಕೊಂಡು ಹೋಗುವ ವಾಹನಗಳ ಮಾಲೀಕರ ಮತ್ತು ಚಾಲಕರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಯಾದಗಿರಿ ತಿಳಿಸಿದ್ದಾರೆ.
ಇನ್ನು ಈ ಘಟನೆ ವಡಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
PublicNext
21/12/2021 03:16 pm