ದಾವಣಗೆರೆ: ತಾಲೂಕಿನ ಎಲೆಬೇತೂರು ಬಳಿ ಟ್ರಾನ್ಸ್ ಫಾರ್ಮರ್ ಗೆ ಬಸ್ ಡಿಕ್ಕಿ ಹೊಡೆದ ಬಳಿಕ ಬಸ್ ಪಲ್ಟಿಯಾಗಿದ್ದು, ಭಾರೀ ಅನಾಹುತವೊಂದು ತಪ್ಪಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಖಾಸಗಿ ಬಸ್ ರಸ್ತೆ ಬದಿಯ ಟ್ರಾನ್ಸ್ ಫಾರ್ಮರ್ ಗೆ ಡಿಕ್ಕಿ ಹೊಡೆದಿದೆ. ಆದ್ರೆ ಅದೃಷ್ಟವಶಾತ್ ದೊಡ್ಡ ಅನಾಹುತವೊಂದು ತಪ್ಪಿದೆ. ದಾವಣಗೆರೆಯಿಂದ ಎಲೆಬೇತೂರು ಮಾರ್ಗವಾಗಿ ಜಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಎಲೆಬೇತೂರು ಬಳಿಯ ತಿರುವಿನಲ್ಲಿ ನಿಯಂತ್ರಣ ತಪ್ಪಿ ವಿನಾಯಕ ಹೆಸರಿನ ಖಾಸಗಿ ಬಸ್ ರಸ್ತೆ ಬದಿಯ ಟ್ರಾನ್ಸ್ ಫಾರ್ಮರ್ ಗೆ ಡಿಕ್ಕಿ ಹೊಡೆದಿದೆ. ಬಳಿಕ ಪಲ್ಟಿಯಾಗಿದ್ದು, ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿವೆ. ಆದರೆ, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇನ್ನು, ಟ್ರಾನ್ಸ್ ಫಾರ್ಮರ್ ಗೆ ಡಿಕ್ಕಿ ಹೊಡೆದಿದ್ದರಿಂದ ಕಂಬ ಮುರಿದಿದ್ದು ದೊಡ್ಡ ಅನಾಹುತವೇ ಸಂಭವಿಸುವ ಸಾಧ್ಯತೆ ಇತ್ತು. ಆದರೆ, ಘಟನೆ ಸಮಯದಲ್ಲಿ ವಿದ್ಯುತ್ ಪೂರೈಕೆ ಇರದಿದ್ದ ಕಾರಣ ಯಾವುದೇ ಅನಾಹತ ಸಂಭವಿಸಿಲ್ಲ. ಅಲ್ಲದೇ ಈಗ ಆ ಭಾಗದಲ್ಲಿ ವಿದ್ಯುತ್ ಪೂರೈಕೆಯನ್ನ ಕಡಿತಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
PublicNext
22/12/2021 04:47 pm