ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನ್ಯೂ ಇಯರ್ ಆರಂಭದಲ್ಲೇ ಆಘಾತ : ಕಾಲ್ತುಳಿತಕ್ಕೆ 12 ಭಕ್ತರು ಬಲಿ

ಶ್ರೀನಗರ: ಎಲ್ಲರೂ ಹೊಸ ವರ್ಷವನ್ನು ಸ್ವಾಗತಿಸುವ ಸಂತೋಷದಲ್ಲಿರುವಾಗಲೇ ನಡೆಯಬಾರದ ಘಟನೆವೊಂದು ನಡೆದು 12 ಜನ ಭಕ್ತರು ಸಾವನ್ನಪಿದ್ದಾರೆ.

ಹೌದು ಜಮ್ಮು ಮತ್ತು ಕಾಶ್ಮೀರದ ಮಾತಾ ವೈಷ್ಣೋ ದೇವಿ ದೇವಸ್ಥಾನದಲ್ಲಿ ನಿನ್ನೆ ರಾತ್ರಿ 2:45 ರ ಸುಮಾರಿಗೆ ಕಾಲ್ತುಳಿತಕ್ಕೆ 12 ಮಂದಿ ಭಕ್ತರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ. ಹೊಸ ವರ್ಷ ಹಿನ್ನೆಲೆಯಲ್ಲಿ ಮಾತಾ ವೈಷ್ಣೋ ದೇವಿ ದೇವಸ್ಥಾನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಬಂದಿದ್ದರು. ಈ ವೇಳೆ ಸಂಭವಿಸಿದ ನೂಕು ನುಗ್ಗಲಿನಲ್ಲಿ ಈ ಅವಘಡ ಸಂಭವಿಸಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ತ್ರಿಕೂಟ ಬೆಟ್ಟದ ಮಾತಾ ವೈಷ್ಣೋ ದೇವಿ ದೇವಸ್ಥಾನದ ಗರ್ಭಗುಡಿಯ ಹೊರಭಾಗದಲ್ಲಿ ಈ ಘಟನೆ ನಡೆದಿದೆ.

ಮೃತರ ಕುಟುಂಬಗಳಿಗೆ ಪ್ರಧಾನಿ ಸಾಂತ್ವಾನ

ಘಟನೆಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ಅಲ್ಲದೆ, ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಗೂ ಗಾಯಾಳುಗಳ ಚಿಕಿತ್ಸೆಗೆ 50 ಸಾವಿರ ರೂ. ಪರಿಹಾರವನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ.

Edited By : Nirmala Aralikatti
PublicNext

PublicNext

01/01/2022 07:51 am

Cinque Terre

55.34 K

Cinque Terre

5

ಸಂಬಂಧಿತ ಸುದ್ದಿ