ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಸ್ & ಟ್ರಕ್ ನಡುವಿನ ಭೀಕರ ಅಪಘಾತ : ಸಂತಾಪ ಸೂಚಿಸಿ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ರಾಂಚಿ: ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಟ್ರಕ್ ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕನಿಷ್ಠ 17ಜನರು ಸಾವನ್ನಪ್ಪಿದ ಭೀಕರ ಅಪಘಾತ ಜಾರ್ಖಂಡ್ನ ಪಾಕುರ್ ಜಿಲ್ಲೆಯಲ್ಲಿ ಬುಧವಾರ ನಡೆದಿದೆ. ಈ ದುರ್ಘಟನೆಯಲ್ಲಿ 26 ಮಂದಿ ಗಾಯಗೊಂಡಿದ್ದಾರೆ.

ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ವಿಷಾದ ವ್ಯಕ್ತಪಡಿಸಿದ್ದಾರೆ. ದುರಂತದಲ್ಲಿ ಸಾವನ್ನಪ್ಪಿದ ಕುಟುಂಬಸ್ಥರಿಗೆ ತಲಾ 2 ಲಕ್ಷ ಪರಿಹಾರ ಹಾಗೂ ಗಾಯಗೊಂಡವರಿಗೆ 50,000 ಪರಿಹಾರ ಧನ ನೀಡುವುದಾಗಿ ಘೋಷಿಸಿದ್ದಾರೆ. ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು. ಬಸ್ ಸಾಹಿಬ್ಜಂಗ್ ನ ಬರ್ಹರ್ವಾದಿಂದ ಡಿಯೋಗರ್ನ ಜಸಿದ್ಹ್ ಗೆ ತೆರಳುತ್ತಿತ್ತು.

ಅಪಘಾತದ ಬಳಿಕ ಕೆಲವು ಪ್ರಯಾಣಿಕರು ಬಸ್ನೊಳಗೆ ಸಿಲುಕಿದ್ದರು. ನಂತರ ಅವರನ್ನು ರಕ್ಷಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

Edited By : Nirmala Aralikatti
PublicNext

PublicNext

06/01/2022 08:03 am

Cinque Terre

81.14 K

Cinque Terre

2