ಬಾಗಲಕೋಟೆ: ಕಬ್ಬು ಹೇರಿಕೊಂಡು ಹೋಗುತ್ತಿದ್ದ ಟ್ರಾಕ್ಟರ್‌ನಲ್ಲಿ ಅಚಾನಕ್ ಆಗಿ ಬೆಂಕಿ ಹೊತ್ತಿಕೊಂಡಿದೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ.
ಜಮಖಂಡಿ ಪಟ್ಟಣದ ಬಸವೇಶ್ವರ ವೃತ್ತದ ಬಳಿ ಬೆಂಕಿ ಕಾಣಿಸುತ್ತಲೇ ಗಾಬರಿಯಾದ ಟ್ರಾಕ್ಟರ್ ಚಾಲಕ ಟ್ರಾಕ್ಟರ್ಅನ್ನು ನಿರ್ಜನ ಪ್ರದೇಶದತ್ತ ಕೊಂಡೊಯ್ಯಲು ಯತ್ನಿಸಿದ್ದಾನೆ. ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರ ಸಮಯ ಪ್ರಜ್ಞೆಯಿಂದ ಅವಘಡ ತಪ್ಪಿದಂತಾಗಿದೆ. ಬೆಂಕಿ ಪರಿಣಾಮ ಬಹುತೇಕ ಪ್ರಮಾಣದ ಕಬ್ಬು ಆಹುತಿಯಾಗಿದೆ. ಕಬ್ಬಿಗೆ ವಿದ್ಯುತ್ ತಂತಿ ತಗುಲಿದ ಪರಿಣಾಮ ಈ ಅವಘಡ ಸಂಭವಿಸಿದೆ. ಇನ್ನು ಈ ಕಬ್ಬನ್ನು ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆಗೆ ಕಳುಹಿಸಲಾಗುತ್ತಿತ್ತು.
PublicNext
07/01/2022 12:14 pm