ಚಾಮರಾಜನಗರ : ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಟಿಪ್ಪರ್ ಸವಾರನನ್ನು ಇನ್ನೂರು ಮೀಟರ್ ಎಳೆದೊಯ್ದ ಭೀಕರ ಅಪಘಾತ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹಳ್ಳದ ಮಾದಳ್ಳಿ ಗೇಟ್ ಸಮೀಪ ನಡೆದಿದೆ.
ನಂಜನಗೂಡು ತಾಲೂಕಿನ ಮಲ್ಲಹಳ್ಳಿ ಗ್ರಾಮದ ಮುದ್ದರಾಜಪ್ಪ(50) ಮೃತಪಟ್ಟ ವ್ಯಕ್ತಿ ಮಗಳ ಮನೆ ಗೋಪಾಲಪುರಕ್ಕೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ವೇಗದಿಂದ ಬಂದ ಟಿಪ್ಪರ್ ಬೈಕ್ ಗೆ ಡಿಕ್ಕಿ ಹೊಡೆದು ಬೈಕ್ ಸಮೇತ ಸವಾರನನ್ನು ಎಳೆದೊಯ್ದಿದೆ.
ಇನ್ನು ಟಿಪ್ಪರ್ ಚಾಲಕನ ಅತಿವೇಗ ಮತ್ತು ಬೇಕಾಬಿಟ್ಟಿಯಾಗಿ ಚಾಲನೆ ಮಾಡಿದ್ದೇ ಈ ಘಟನೆಗೆ ಕಾರಣವಾಗಿದೆ. ಇದರಿಂದಾಗಿ ಅರ್ಧ ಗಂಟೆಗೂ ಹೆಚ್ಚು ಕಾಲ ರೈತ ಮುಖಂಡರು ಹಾಗೂ ಸ್ಥಳೀಯರಿಂದ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು, ಮಾತ್ರವಲ್ಲದೆ ಟಿಪ್ಪರ್ ಗಳಿಗೆ ಕಡಿವಾಣ ಹಾಕದ ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದರು.
ಸ್ಥಳಕ್ಕೆ ಚಾಮರಾಜನಗರ ಡಿವೈಎಸ್ಪಿ ಪ್ರಿಯಾದರ್ಶಿನಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗುಂಡ್ಲುಪೇಟೆ ಬೇಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
08/01/2022 07:42 pm