ಬಳ್ಳಾರಿ: ಬಳ್ಳಾರಿ ತಾಲೂಕಿನ ಸಂಗನಕಲ್ಲು ಗ್ರಾಮದ ಬಳಿ ತಡರಾತ್ರಿಯಲ್ಲಿ ಬೈಕ್ ಮತ್ತು ಲಾರಿ ಮುಖಾಮುಖಿಯಾದ ಹಿನ್ನೆಲೆ ಸ್ಥಳದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.
ರಾಜಶೇಖರ ಮತ್ತು ಲಕ್ಷ್ಮೀಕಾಂತ ಸ್ಥಳದಲ್ಲೇ ಮೃತಪಟ್ಟ ಯುವಕರು. ಈ ದುರ್ಘಟನೆಯಲ್ಲಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಅವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆಯ ಕುರಿತು ಬಳ್ಳಾರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.
PublicNext
12/01/2022 10:59 am