ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗೂಡ್ಸ್ ವಾಹನಕ್ಕೆ ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ವಾಹನ...!

ಗದಗ: ನಿಂತಿದ್ದ ಗೂಡ್ಸ್ ವಾಹನವೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ವಾಹನ ಹೊತ್ತಿ ಉರಿದ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಬಸವೇಶ್ವರ ನಗರದಲ್ಲಿ ನಡೆದಿದೆ.

ನಿಂತಿದ್ದ ಗೂಡ್ಸ್ ಗಾಡಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ವಾಹನ ಸುಟ್ಟು ಕರಕಲಾಗಿದೆ. ರಬ್ಬಾನಿಸಾಬ್ ಮೀರಚ್ಚನೆ ಎಂಬುವರಿಗೆ ಸೇರಿದ ವಾಹನಕ್ಕೆ ಬೆಂಕಿ ತಗುಲಿದೆ.

ಇನ್ನೂ ಸುದ್ದಿ ತಿಳಿಯುತ್ತಿದ್ದಂತೆ ಓಣಿಯ ನಿವಾಸಿಗಳು ಅಗ್ನಿಶಾಮಕ ಇಲಾಖೆಗೆ ಫೋನ್ ಮಾಡಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಈ ಕುರಿತು ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Shivu K
PublicNext

PublicNext

12/01/2022 01:24 pm

Cinque Terre

70.7 K

Cinque Terre

0

ಸಂಬಂಧಿತ ಸುದ್ದಿ