ಹಾವೇರಿ: ಲಾರಿ ಹಾಗೂ 2 ಕಾರುಗಳ ನಡುವೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಕಡೂರು ಕ್ರಾಸ್ ಬಳಿ ನಡೆದಿದೆ. ಇಂದು ಶನಿವಾರ ಸಂಜೆ ನಡೆದ ಈ ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರೆಲ್ಲರೂ ಒಂದೇ ಕುಟುಂಬದವರು ಎಂಬ ಮಾಹಿತಿ ದೊರೆತಿದೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಮತ್ತಿಕೋಟಿ ಗ್ರಾಮದವರಾದ ಇವರು ಎರಡು ಕಾರ್‌ಗಳಲ್ಲಿ ಹರಿಹರ ಸಮೀಪದ ಉಕ್ಕಡಗಾತ್ರಿ ಸುಕ್ಷೇತ್ರಕ್ಕೆ ತೆರಳಿದ್ದರು. ದರ್ಶನ ಮುಗಿಸಿಕೊಂಡು ವಾಪಸ್ ತೆರಳುವಾಗ ಈ ದುರ್ಘಟನೆ ನಡೆದಿದೆ. ಅಪಘಾತ ಕಂಡ ಸ್ಥಳೀಯರು ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲು ನೆರವಾಗಿದ್ದಾರೆ. ಓರ್ವ ಬಾಲಕಿ ಸೇರಿದಂತೆ ಒಟ್ಟು ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ರಟ್ಟಿಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
PublicNext
15/01/2022 09:06 pm