ಯಾದಗಿರಿ : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಕುಂಬಾರಪೇಠ ಹೊರವಲಯದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಚಾಲಕ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.
ಮರಳು ತುಂಬಿಕೊಂಡು ತೆರಳುತ್ತಿದ್ದ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಕಾಲುವೆಗೆ ಉರುಳಿ ಬಿದ್ದಿದೆ. ಈ ವೇಳೆ ಚಾಲಕ ಸಾವನ್ನಪ್ಪಿದ್ದಾನೆ.
ಸ್ಥಳಕ್ಕೆ ಸುರಪುರ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆಯುತ್ತಿದ್ದು, ಈ ಘಟನೆ ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
PublicNext
19/01/2022 11:01 am