ಭುವನೇಶ್ವರ: ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್ವೊಂದು ಟ್ರಕ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಪರಿಣಾಮ ಮಗು ಸೇರಿ ಆರು ಜನ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಒಡಿಶಾದಲ್ಲಿ ನಡೆದಿದೆ.
ಪ್ರಯಾಣಿಕರಿದ್ದ ಬಸ್ ಒಡಿಶಾದ ಉಡಾಲಾದಿಂದ ಭುವನೇಶ್ವರಕ್ಕೆ ತೆರಳುತ್ತಿತ್ತು. ಬಾಲಸೋರ್ ಜಿಲ್ಲೆಯ ಸೊರೊ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಟ್ರಕ್ಗೆ ಡಿಕ್ಕಿ ಹೊಡೆದು, ಪಲ್ಟಿಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಈ ದುರ್ಘಟನೆಯಲ್ಲಿ 20 ಜನರು ಗಾಯಗೊಂಡಿದ್ದಾರೆ.
PublicNext
22/01/2022 04:32 pm