ದಾವಣಗೆರೆ: ಹರಿಹರ ಸಮೀಪದ ಡಿಜೆ ಅಮ್ಯೂಸ್ಮೆಂಟ್ ಪಾರ್ಕ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಯಾವುದೇ ಅನಾಹುತ ಆಗಿಲ್ಲ.
ಹೊಸದಾಗಿ ನಿರ್ಮಿಸಿರುವ ಕಾಟೇಜ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅಮ್ಯೂಸ್ಮೆಂಟ್ ಪಾರ್ಕ್ ಹೊತ್ತಿ ಉರಿದಿದೆ. ಬೆಂಕಿಗಾಹುತಿಯಾಗಿ ಸಂಪೂರ್ಣ ಭಸ್ಮವಾಗಿದೆ.
ಅಮ್ಯೂಸ್ಮೆಂಟ್ ಪಾರ್ಕ್ ನಲ್ಲಿ ನಿರ್ಮಿಸಿರುವ ಕಾಟೇಜ್ ಗೆ ಆಕಸ್ಮಿಕ ಬೆಂಕಿ ತಗುಲಿದ್ದು, ಒಳಗಡೆ ಇದ್ದಂಥ ಬೆಲೆಬಾಳುವ ವಸ್ತುಗಳು, ಕಟ್ಟಿಗೆ ಇತರೆ ಸಾಮಗ್ರಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ.
ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ್ದು, ಅವಘಡ ನಡೆದ ಸ್ಥಳಕ್ಕೆ ಕೂಡಲೇ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಕ್ಕಳ ಆಟಿಕೆ ವಸ್ತುಗಳು ಸಂಪೂರ್ಣ ಸುಟ್ಟುಕರಕಲಾಗಿವೆ.
PublicNext
24/01/2022 03:10 pm